लाइव कैलेंडर

March 2026
M T W T F S S
 1
2345678
9101112131415
16171819202122
23242526272829
3031  
09/03/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಸಮ್ಮೆಳನದ ಸರ್ವಾಧ್ಯಕ್ಷರಾಗಿ ಮೋಟಮ್ಮ ಆಯ್ಕೆ

ಚಿಕ್ಕಮಗಳೂರು: ಕರ್ನಾಟಕ ಜಾನಪದ

ಪರಿಷತ್ತಿನಿಂದ ನಗರದಲ್ಲಿ విప్రిలో ತಿಂಗಳಿನಲ್ಲಿ ನಡೆಯಲಿರುವ 6 ನೇ ಜಿಲ್ಲಾ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮಾಜಿ ಸಚಿವೆ ಮೋಟಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಡಾ ಜೆ.ಪಿ. ಕೃಷ್ಣಗೌಡ ಅವರ ಅಧ್ಯಕ್ಷತೆಯಲ್ಲಿ ಮೂಡಿಗೆರೆಯಲ್ಲಿ ಬುಧವಾರ ನಡೆದ ಪರಿಷತ್ತಿನ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್, ಮೂಡಿಗೆರೆ ತಾಲೂಕು ಅಧ್ಯಕ್ಷ ಕುನ್ನಳ್ಳಿ ರವಿ, ಸಂಚಾಲಕ ರವಿ, ಗೌರವಾಧ್ಯಕ್ಷ ಸುಬ್ರಹ್ಮಣ್ಯ, ಚಿಕ್ಕಮಗಳೂರು ತಾಲೂಕು ಕ ಸಾ ಪ ಅಧ್ಯಕ್ಷ ಅಧ್ಯಕ್ಷ ಮಾವಿನಕೆರೆ ದಯಾನಂದ್, ಪರಿಷತ್ತಿನ ತಾಲೂಕು ಅಧ್ಯಕ್ಷ ಸಚಿನ್ ಸಿಂಗ್ ಉಪಾಧ್ಯಕ್ಷ ಸಂದೀಪ್, ದೀಪಿಕ, ಚಂದ್ರೇಗೌಡ ಸಭೆಯಲ್ಲಿ ಪಾಲ್ಗೊಂಡಿದ್ದರು.

3 ಬಾರಿ ಮೂಡಿಗೆರೆಯ ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ವಿರೋಧ ಪಕ್ಷದ ನಾಯಕಿಯಾಗಿ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿರುವ ಮೋಟಮ್ಮ ಅವರು ಸ್ವತಃ ಜಾನಪದ ಕಲಾವಿದೆ ಹಾಗೂ ಗಾಯಕಿಯಾಗಿದ್ದಾರೆ, ಮೂಡಿಗೆರೆಯಲ್ಲಿ ಹಲವು ವರ್ಷಗಳಿಂದ ಸರಳ ಸಾಮೂಹಿಕ ವಿವಾಹ, ಜಾನಪದ ಭಾಷೆಗಳನ್ನು ಪ್ರತಿ ವರ್ಷ ನಡೆಸುತ್ತಿದ್ದಾರೆ

About Author

Leave a Reply

Your email address will not be published. Required fields are marked *

You may have missed